ಬೆಂಗಳೂರು: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮಹಿಳೆಯನ್ನು ಕೊಲೆ ಮಾಡಿ ಕೆರೆಯಲ್ಲಿ ಶವ ಎಸೆದ ಆರೋಪಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ರತನ್ ದಾಸ್(27) ಬಂಧಿತ ಆರೋಪಿ. ಅಂಜಲಿನಾಥ್(47) ಎಂಬ ಮಹಿಳೆ ಆರೋಪಿಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ಬೇಸತ್ತ ರತನ್, ಮಾತುಕತೆ ನೆಪದಲ್ಲಿ ತಿರುಪಾಳ್ಯ ಕೆರೆಯ ಬಳಿ ಕರೆಸಿ ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ಕೆರೆಯಲ್ಲಿ ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲು ಅಸಹಜ ಸಾವು ಪ್ರಕರಣ ದಾಖಲಿಸಿದ್ದ ಪೊಲೀಸರು, ಮರಣೋತ್ತರ ಪರೀಕ್ಷಾ ವರದಿಯಲ್ಲಿ ಕೊಲೆ ದೃಢಪಟ್ಟ ಬಳಿಕ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

