ಹಾಸನ: ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನ ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ 36 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಟೈರ್ ಸ್ಫೋಟವಾದ ಬಳಿಕ ಬೆಂಕಿ ವ್ಯಾಪಿಸಿದ್ದು, ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪ್ರಯಾಣಿಕರ ಲಗೇಜ್, ಮೊಬೈಲ್, ಹಣ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದು, ಶಾಂತಿಗ್ರಾಮ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

