ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿದ ಚರ್ಚ್ ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರೂರಿನ ಗಿರಿಜನರು ಕಾಡಿನಲ್ಲಿ ಅಕ್ರಮವಾಗಿ ಚರ್ಚ್ ನಿರ್ಮಿಸಿದ್ದು, ಶನಿವಾರ ಉದ್ಘಾಟನೆ ಕಾರ್ಯಕ್ರಮ ಹಿನ್ನೆಲೆ ತಮಿಳುನಾಡಿನಿಂದ ಜನರನ್ನು ಕರೆಸಲಾಗಿತ್ತು. ಈ ವೇಳೆ ಸ್ಥಳೀಯರು ಕಾರ್ಯಕ್ರಮವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕುಶಾಲನಗರ ವೃತ್ತ ನಿರೀಕ್ಷಕ ಪ್ರದೀಪ್, ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿಗಳಾದ ಮೋಹನ್‌ರಾಜ್, ರಾಮಚಂದ್ರ, ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶ್ರೀಕಾಂತ್, ಪಿಡಿಒ ಆಸ್ಮಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮೂಲಕ ಯಾವುದೇ ಅನುಮತಿ ಪಡೆಯದೇ ಕಟ್ಟಡ ನಿರ್ಮಿಸಿರುವುದಾಗಿ ತಿಳಿದುಬಂದಿದೆ. ಈ ವೇಳೆ ಸ್ಥಳೀಯರು ಹಾಗೂ ಆದಿ ನಿವಾಸಿಗಳ ನಡುವೆ ವಾಗ್ವಾದ ನಡೆದಿದ್ದು, ತಮ್ಮಿಷ್ಟದಂತೆ ತಾವು ಪ್ರಾರ್ಥನೆಯಲ್ಲಿ ತೊಡಗಿರುವುದಾಗಿ ಆದಿ ನಿವಾಸಿಗಳು ವಾದಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

