Breaking News

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಕಾರು ತಡೆದು 26 ಲಕ್ಷ ರೂ. ದರೋಡೆ

ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ತಡೆದು 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಹೊರವಲಯದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿಯ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ದರೋಡೆ ನಡೆಸಿದೆ. ಮೈಸೂರು ಖಾಸಗಿ ಕಂಪನಿಯ ಉದ್ಯೋಗಿ ಗೋವಿಂದರಾಜು ಐ20 ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಹಣ ದೋಚಿ ಪರಾರಿಯಾಗಿದ್ದಾರೆ. ಅವರು ತಮ್ಮ ಕಂಪನಿಗೆ ಸೇರಿದ ಹಣವನ್ನು ಮೈಸೂರಿನಿಂದ ಬೆಂಗಳೂರಿಗೆ ತೆಗೆದುಕೊಂಡು ತೆರಳುತ್ತಿದ್ದರು. ಮದ್ದೂರು ಹೊರವಲಯದ ಐಶ್ವರ್ಯ ಕಾನ್ವೆಂಟ್ ಸಮೀಪ ಇನೋವಾ ಕಾರ್ ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಗೋವಿಂದರಾಜು ಅವರ ಕಾರ್ ಅಡ್ಡಗಟ್ಟಿದ್ದಾರೆ. ಕಾರಿನ ಗಾಜು ಒಡೆದು ಮಾರಕಾಸ್ತ್ರ ತೋರಿಸಿ ಬೆದರಿಸಿದ್ದಾರೆ. ಬಳಿಕ 26 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ. ಕೂಡಲೇ ಗೋವಿಂದರಾಜು ಮದ್ದೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ವೃತ್ತ ನಿರೀಕ್ಷಕ ನವೀನ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಡಾ. ಶೋಭಾರಾಣಿ ಮಾರ್ಗದರ್ಶನದಲ್ಲಿ ದರೋಡೆಕೋರರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *