Breaking News

ಬೆಂಗಳೂರಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ : ಮತ್ತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿ ಸಾಧ್ಯತೆ!

ನಿರಾಶ್ರಿತರ ಆಶ್ರಮದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಪ್ರಜೆಗಳು ಪರಾರಿ ಆಗಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ. ನೈಜೀರಿಯಾ ಉಗಾಂಡಾ ಕಿನ್ಯಾ ಬಾಂಗ್ಲಾದ ಅಕ್ರಮ ವಲಸಿಗರು ಎಸ್ಕೇಪ್ ಆಗಿದ್ದಾರೆ. ನಾಲ್ವರು ಮಹಿಳೆಯರು ಪರಾರಿಯಾಗಿದ್ದಾರೆ. ತೊಪಿಷ್ಟ, ನಗವ, ಸಫೀನಾ, ಪಿತಿನ ಎನ್ನುವರು ಪರಾರಿಯಾಗಿದ್ದಾರೆ. ಅಕ್ರಮ ವಲಸಿಗರು ಈ ಕಟ್ಟಡದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ. ಪೊಲೀಸರ ಬಂದೋಬಸ್ತ ನಡುವೆ ಪರಾರಿಯಾಗಿದ್ದಾರೆ. ಅಕ್ರಮ ವಲಸಿಗರನ್ನು FRRO ಜೈಲಿನಲ್ಲಿ ಜಾಗ ಇಲ್ಲದ ಕಾರಣ ನಿರಾಶ್ರಿತರ ಕೇಂದ್ರದಲ್ಲಿ ಬಂದಿ ಇರಿಸಲಾಗಿತ್ತು. ಅಕ್ರಮವಾಗಿ ವಾಸವಿರುವ ವಿದೇಶಿಗರ ಬಳಿ ಗಾಂಜಾ ಡ್ರಗ್ಸ್ ಪತ್ತೆಯಾಗಿದ್ದು, ಎಸ್ಕೇಪ್ ಆಗಿ ಮತ್ತೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಈಗಾಗಲೇ ಸೇರಿದಂತೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು ವೀಸಾ ಮುಗಿದರು, ತಮ್ಮ ದೇಶಕ್ಕೆ ಮರಳದೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಹೋಮ ಆಫ್ ಹೋಪ್ ನಿರಾಶ್ರಿತ ಕೇಂದ್ರದಲ್ಲಿ ಇಟ್ಟಿರುವ ಎಫ್ ಆರ್ ಆರ್ ಆರ್ ಬೆಂಗಳೂರಿನ ಚಿಕ್ಕ ಗುಬ್ಬಿ ಬಳಿ ಇರುವ ನಿರಾಶ್ರಿತರ ಕೇಂದ್ರ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *