Breaking News

ಬೆಂಗಳೂರು ಏರ್ಪೋರ್ಟ್ ನಲ್ಲಿ ಹೈಡ್ರೋ ಗಾಂಜಾ ಸಾಗಣೆ – 7 ಕೋಟಿ ರೂ. ಮಾಲು ಜಪ್ತಿ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 7.12 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ಪ್ರತ್ಯೇಕ ವಿಮಾನಗಳಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರ ನಡವಳಿಕೆಯಲ್ಲಿ ಅಸಹಜತೆ ಕಂಡುಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅಧಿಕಾರಿಗಳು ತಕ್ಷಣ ಅವರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಆರೋಪಿಗಳ ಬ್ಯಾಗ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅಂತರರಾಷ್ಟ್ರೀಯ ಡ್ರಗ್ಸ್ ಪೆಡ್ಲಿಂಗ್ ಜಾಲ ಬಯಲಾಗಿದೆ. ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ 20.7 ಕೆಜಿ ತೂಕದ ಅತ್ಯಂತ ದುಬಾರಿ ತಳಿಯ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ವಿದೇಶಿ ಪೆಡ್ಲರ್‌ಗಳನ್ನು ಬಂಧಿಸಿದ್ದು, ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಈ ಆರೋಪಿಗಳಿಗೆ ಅಂತರರಾಷ್ಟ್ರೀಯ ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಇದೆಯೇ ಮತ್ತು ಬೆಂಗಳೂರಿನಲ್ಲಿ ಈ ಗಾಂಜಾವನ್ನು ಯಾರಿಗೆ ತಲುಪಿಸಲು ತರಲಾಗಿತ್ತು ಎಂಬ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *