Breaking News

ತಮ್ಮನಿಂದಲೇ ಅಣ್ಣನ ಕೊಲೆ

ಲಿಂಗಸುಗೂರು : ಪಟ್ಟಣದ ಬಸವಸಾಗರ ಕ್ರಾಸ್ ಹತ್ತಿರದ ಸಿದ್ದರಾಮೇಶ್ವರ ಶಾಲೆ ಬಳಿ ತಮ್ಮ ತನ್ನ ಅಣ್ಣನನ್ನು ಮಲಗಿರುವಾಗ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಬಸವರಾಜ ವಾಸದೇವ (32) ಕೊಲೆಯಾದ ವ್ಯಕ್ತಿ. ಬಸವರಾಜ ಕುಡಿದು ಬಂದು ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನು ಎನ್ನಲಾಗಿದೆ. ಈ ವಿಚಾರವಾಗಿ ಬೇಸರಗೊಂಡ ಆತನ ತಮ್ಮ ಶ್ರೀಧರ (27) ಕೊಲೆ ಮಾಡಿರುವುದಾಗಿ ಆತನ ತಂದೆ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *