ಕಲಬುರಗಿ: ನಗರದ ರಾಮ ಮಂದಿರದ ಬಳಿ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಭದ್ರತಾ ಸಿಬ್ಬಂದಿಯೊಬ್ಬರನ್ನು ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಆಳಂದ ತಾಲ್ಲೂಕಿನ ಹಡಲಗಿ ಗ್ರಾಮದ ನಿವಾಸಿ ರವಿಚಂದ್ರ ಖೇಡ್ (45) ಕೊಲೆಯಾದ ದುರ್ದೈವಿ. ಹಾಲಿ ನಗರದ ರಾಣೇಶಪೀರ್ ದರ್ಗಾ ಪ್ರದೇಶದಲ್ಲಿ ನೆಲೆಸಿದ್ದರು.ರವಿಚಂದ್ರ ಕಳೆದ ನಾಲ್ಕು ವರ್ಷಗಳ ಹಿಂದಷ್ಟೇ ಬಿಎಸ್‌ಎಫ್‌ನಿಂದ್ ನಿವೃತ್ತರಾಗಿದ್ದರು. ಸದ್ಯ ಕಲಬುರಗಿಯ ಇಂಡಿಯನ್ ಆಯಿಲ್ ಡಿಪೊದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಒಂದು ದಿನದ ಮಟ್ಟಿಗೆ ಪೆಟ್ರೋಲ್ ಬಂಕ್‌ನಲ್ಲಿ ಕೆಲಸಕ್ಕೆ ಬಂದಿದ್ದರು ಎನ್ನಲಾಗಿದೆ. ರವಿಚಂದ್ರ ಅವರು ರಾಮ ಮಂದಿರದ ಸಮೀಪವಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದಾಗ ಕೊಲೆ ನಡೆದಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಡಿಪಿಸಿ ಶಾಲೂ, ಎಸಿಪಿ ಶರಣಬಸಪ್ಪ ಸುಬೇದಾರ, ಸ್ಟೇಷನ್ ಬಜಾರ್ ಠಾಣೆ ಇನ್‌ಸ್ಪೆಕ್ಟರ್ ಗುರು ಪಾಟೀಲ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಡಿತ ಮತ್ತಿನಲ್ಲಿ ಸ್ನೇಹಿತರೇ ಸೇರಿ ಕೊಲೆ ಮಾಡಿರುವ ಬಗೆಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

