Breaking News

ಬೆಂಗಳೂರು | ವಿದ್ಯಾರ್ಥಿಗೆ ಚಾಕು ಇರಿತ: ಮೂವರ ಬಂಧನ

ರಾಮಮೂರ್ತಿನಗರದ ಬಳಿ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ಬಿಬಿಎಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ್ದು, ಘಟನೆ ನಡೆದ ಕೆಲವೇ ತಾಸುಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿರುವ ವಿದ್ಯಾರ್ಥಿ ಧೀರಜ್ (21) ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಾದ ಭುವನ್, ಮಿಥುನ್ ಮತ್ತು ಬಾಲಕನನ್ನು ಬಂಧಿಸಲಾಗಿದೆ ಎಂದು ರಾಮಮೂರ್ತಿನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ರಾಮಮೂರ್ತಿನಗರ ಸಮೀಪದ ಬಂಜಾರ ಲೇಔಟ್‍ನ ಧೀರಜ್, ಬೆಳಗಿನ ಜಾವ ಬೈಕ್‍ನಲ್ಲಿ ಹೊಸಕೋಟೆ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಹೊರ ವರ್ತುಲ ರಸ್ತೆಯಲ್ಲಿ ಆರೋಪಿಗಳು ಬೈಕ್‌ನಲ್ಲಿ ಎದುರಿನಿಂದ ಬಂದಿದ್ದಾರೆ. ಈ ವಿಚಾರಕ್ಕೆ ಧೀರಜ್‍ ಹಾಗೂ ಆರೋಪಿಗಳ ನಡುವೆ ವಾಗ್ವಾದ ನಡೆದು ಜಗಳವಾಗಿದೆ. ಬಳಿಕ ಆರೋಪಿಗಳು ಧೀರಜ್‍ನ ತೊಡೆ ಹಾಗೂ ಬೆನ್ನಿಗೆ ಚಾಕು ಇರಿದು ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬಾಣಸವಾಡಿ ಠಾಣೆ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಬೈಕ್ ಜಪ್ತಿ ಮಾಡಲಾಗಿದೆ. ಆರೋಪಿಗಳು ಆರ್.ಎಸ್.ಪಾಳ್ಯದ ಬಳಿಯ ಜಾನಕಿರಾಮ ಲೇಔಟ್‍ನವರು. ಅವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *