ಮೈಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಪೆಡ್ಲರ್‌ಗಳನ್ನು ಆಲನಹಳ್ಳಿ ಪೊಲೀಸರು ಶನಿವಾರ ಬಂಧಿಸಿ ಆರೋಪಿಗಳಿಂದ 10.90 ಕೆ.ಜಿ. ತೂಕದ 5.05 ಲಕ್ಷ ರೂ. ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಉದಯಗಿರಿ ಬಳಿಯ ಕೆ.ಎನ್.ಪುರದ ಮಂಜುನಾಥ ಅಲಿಯಾಸ್ ತೋಟಿ ಮಂಜ, ಬೆಂಗಳೂರಿನ ಪಾಪರೆಡ್ಡಿಪಾಳ್ಯದ ಮಂಜುನಾಥ ಅಲಿಯಾಸ್ ಕುಂಟ ಮಂಜ, ನಾಗರಬಾವಿ ಬಳಿಯ ಮೂಡಲಪಾಳ್ಯ ನಿವಾಸಿ ಬಿ.ಆರ್.ಕಾರ್ತಿಕ್ ಬಂಧಿತ ಆರೋಪಿಗಳು. ಇವರು ಶನಿವಾರ ಶಾಂತವೇರಿ ಗೋಪಾಲಗೌಡ ನಗರದ ರಸ್ತೆಯಲ್ಲಿ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಆರೋಪಿಗಳನ್ನು ಬಂಧಿಸಲಾಗಿದೆ. ಗಾಂಜಾ ಸಾಗಾಟಕ್ಕೆ ಬಳಕೆ ಮಾಡಿದ ಕಾರನ್ನು ವಶ ಪಡಿಸಿಕೊಳ್ಳಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

