Breaking News

ಗಾಳದ ವಿಷಯಕ್ಕೆ ಚಾಕು ಇರಿತ

ಹುಬ್ಬಳ್ಳಿ: ಉಣಕಲ್ ಕೆರೆಯಲ್ಲಿ ಮೀನು ಹಿಡಿಯುವ ವಿಷಯವಾಗಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದ್ದು, ವಿದ್ಯಾನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ತಾಫ್ ಮತ್ತವನ ಸ್ನೇಹಿತರು ಸೇರಿ ಇಸ್ಮಾಯಿಲ್ ನದಾಫ್ (22) ಎಂಬಾತನಿಗೆ ಇರಿದಿದ್ದಾರೆ. ಗಾಯಗೊಂಡ ಇಸ್ಮಾಯಿಲ್‌ನನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೇ 17ರಂದು ಮಧ್ಯಾಹ್ನ ಮೀನು ಹಿಡಿಯಲು ಇವರೆಲ್ಲರೂ ಹೋಗಿದ್ದರು. ಮೀನಿನ ಗಾಳದ ದಾರ ದಾಟುವ ಸಂಬಂಧ ಜಗಳವಾಗಿ ಇಸ್ಮಾಯಿಲ್ ಕುತ್ತಿಗೆ ಹತ್ತಿರ ಚಾಕುವಿನಿಂದ ಇರಿಯಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *