ಬೆಂಗಳೂರು ಹೃದಯಭಾಗದಲ್ಲಿರುವ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಕಾನೂನುಬಾಹಿರವಾಗಿ ಸಂಗ್ರಹಿಸಿಡಲಾಗಿದ್ದ ಜೀವಂತ ಗುಂಡುಗಳು ಪತ್ತೆಯಾಗಿದೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮೆಜೆಸ್ಟಿಕ್ ಸಮೀಪದ ಗಾಂಧಿನಗರದಲ್ಲಿರುವ ಲಾಡ್ಜ್‌ನ ಸಿಬ್ಬಂದಿಗೆ ಶಂಕಿತನ ನಡೆ ಹಾಗೂ ಆತನ ಬಳಿಯಿದ್ದ ವಸ್ತುಗಳ ಬಗ್ಗೆ ಅನುಮಾನ ಬಂದಿದೆ. ತಕ್ಷಣ ಜಾಗೃತರಾದ ಸಿಬ್ಬಂದಿ ಈ ಕುರಿತು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಲಾಡ್ಜ್ ರೂಮ್ ಮೇಲೆ ತಕ್ಷಣ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಅಧಿಕೃತ ದಾಖಲೆಗಳಿಲ್ಲದ ಜೀವಂತ ಗುಂಡುಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲೇ ಇದ್ದ ಶಂಕಿತ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಗುಂಡುಗಳನ್ನು ಬೆಂಗಳೂರಿಗೆ ತಂದ ಉದ್ದೇಶವೇನು? ಯಾವುದೇ ರೌಡಿ ಗ್ಯಾಂಗ್‌ಗೆ ಪೂರೈಸಲು ತರಲಾಗುತ್ತಿತ್ತೇ? ಅಥವಾ ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತೇ? ಎಂಬ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

