Breaking News

ಬಾಲ್ಯ ವಿವಾಹ ತಡೆಯಲು ಹೋದ ಅಧಿಕಾರಿಗಳು, ಪೊಲೀಸರ ಮೇಲೆ ಹ*ಲ್ಲೆ; ಆರೋಪಿ ವಶಕ್ಕೆ

ಚಿಕ್ಕಮಗಳೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಬಾಲ್ಯ ವಿವಾಹ ತಡೆಯಲು ತೆರಳಿದ್ದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ. ಬಾಲ್ಯ ವಿವಾಹ ನಡೆಯುತ್ತಿರುವ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಪಿಡಿಒ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು. ಗಲಾಟೆ ಸಂಭವಿಸುವ ಸಾಧ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಯ ಸಬ್ ಇನ್ಸೆಕ್ಟರ್ ರಘುನಾಥ್ ಎಸ್.ವಿ. ಹಾಗೂ ಜೀಪ್ ಚಾಲಕ ಸುನಿಲ್ ಕುಮಾರ್ ಭದ್ರತೆಗೆಂದು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಬಾಲ್ಯ ವಿವಾಹದ ಕಾನೂನು ಕುರಿತು ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾಗ, ಸಚಿನ್ (29) ಎಂಬಾತ ಸಬ್ ಇನ್ಸೆಕ್ಟರ್ ರಘುನಾಥ್ ಅವರನ್ನು ತಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ತಡೆಯಲು ಮುಂದಾದ ಜೀಪ್ ಚಾಲಕ ಸುನಿಲ್ ಕುಮಾರ್ ಮೇಲೂ ಹಲ್ಲೆ ನಡೆಸಿ, ಪೊಲೀಸ್ ಸಮವಸ್ತ್ರ ಹರಿದಿದ್ದಾನೆ ಎನ್ನಲಾಗಿದೆ. ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲು ಜಾರಿ ಬಿದ್ದು ತಲೆಗೆ ಗಾಯಗೊಂಡಿದ್ದಾನೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಸುನಿಲ್ ಕುಮಾರ್ ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಆರೋಪಿ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *