Breaking News

ಕಸ್ಟಮ್ಸ್ ಅಧಿಕಾರಿ ಮೇಲೆ ಅತ್ಯಾಚಾರ: ಕೃಪಲಾನಿ ವಿರುದ್ಧ ಇನ್ನೊಂದು ಕೇಸ್‌

ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಂಧಿತನಾಗಿರುವ ಕೃಪಲಾನಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಕಸ್ಟಮ್ಸ್ ಅಧಿಕಾರಿ ಆಂಥೋನಿ ರಾಜ್ ನೀಡಿದ ದೂರಿನ ಮೇರೆಗೆ ಹಲಸೂರು ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಸ್ಮಗ್ಲಿಂಗ್ ಪ್ರಕರಣದಲ್ಲಿ ದಂಡ ವಿಧಿಸಿದ್ದಕ್ಕೆ ಕೋಪಗೊಂಡಿದ್ದ ಆರೋಪಿ, ಆಂಥೋನಿ ರಾಜ್ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಜಿಎಸ್‌ಟಿ ಹಾಗೂ ಕಸ್ಟಮ್ಸ್ ಮಹಿಳಾ ಅಧಿಕಾರಿಗಳೊಂದಿಗೆ ಸಲುಗೆ ಬೆಳೆಸಿ, ಬಳಿಕ ಪ್ರೀತಿ ಹಾಗೂ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸುತ್ತಿದ್ದ ಎಂದು ಆರೋಪಿಸಲಾಗಿದೆ. ನಂತರ ಫೋಟೋ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ರೀತಿ ಹಲವು ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದ್ದಾನೆ ಎನ್ನಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *