Breaking News

310 ಗ್ರಾಂ ಚಿನ್ನ, 26 ಕೆಜಿ ಬೆಳ್ಳಿ ಆಭರಣ ಜಪ್ತಿ, ಇಬ್ಬರ ಬಂಧನ

ಧಾರವಾಡ ಹಾಗೂ ಹಾವೇರಿ ಜಿಲ್ಲಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮನೆ ಹಾಗೂ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 310 ಗ್ರಾಂ ಚಿನ್ನ, 26 ಕೆಜಿ ಬೆಳ್ಳಿ ಆಭರಣ, ಕಳವು ಮಾಡಿದ್ದ ಬೊಲೆರೋ ವಾಹನ ಸೇರಿದಂತೆ ಒಟ್ಟು 1.15 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣೆ ವ್ಯಾಪ್ತಿಯ ಕಿರೇಸೂರ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಹಾಗೂ ಹಾನಗಲ್ ತಾಲೂಕಿನ ಚಿಕ್ಕಾಂಶಿ ಹೊಸೂರ ಗ್ರಾಮದಲ್ಲಿನ ಬಂಗಾರದ ಅಂಗಡಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅಂಗಡಿಯಲ್ಲಿದ್ದ ಭಾರೀ ತಿಜೋರಿಯನ್ನೇ ಹೊತ್ತೊಯ್ದಿದ್ದ ಆರೋಪಿಗಳು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *