Breaking News

ಅಂಗವಿಕಲರ ಬಸ್ ಪಾಸ್ ದುರ್ಬಳಕೆ – ಟೀಚರಮ್ಮನಿಗೆ ಒಂದು ವರ್ಷ ಜೈಲು!

ಮಂಡ್ಯ: ಅಂಗವಿಕಲರಿಗೆ ಸರ್ಕಾರ ನೀಡುವ ಉಚಿತ ಬಸ್ ಪಾಸ್ ಸೌಲಭ್ಯವನ್ನು ಅಕ್ರಮವಾಗಿ ದುರುಪಯೋಗಪಡಿಸಿಕೊಂಡಿದ್ದ ಸರ್ಕಾರಿ ಶಾಲಾ ಶಿಕ್ಷಕಿಗೆ ನ್ಯಾಯಾಲಯ 1 ವರ್ಷದ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದೆ. ಮದ್ದೂರು ತಾಲೂಕಿನ ಎರಗನಹಳ್ಳಿ ಗ್ರಾಮದ ಎ. ಶ್ರುತಿ ಎಂಬ ಶಿಕ್ಷಕಿ, ಅಂಗವೈಕಲ್ಯ ಇಲ್ಲದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಅಂಗವಿಕಲರ ಉಚಿತ ಬಸ್ ಪಾಸ್ ಪಡೆದು ಹಲವು ದಿನಗಳಿಂದ ಉಚಿತ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ದಾಖಲಾಗಿದ್ದ ಪ್ರಕರಣದ ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಜವಾಬ್ದಾರಿಯುತ ಶಿಕ್ಷಕ ವೃತ್ತಿಯಲ್ಲಿದ್ದರೂ ನಕಲಿ ದಾಖಲೆ ಬಳಸಿ ಸರ್ಕಾರಕ್ಕೆ ವಂಚನೆ ಎಸಗಿದ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *