Breaking News

ಅಕ್ರಮ ಚಟುವಟಿಕೆ: ಐವರ ಗಡಿಪಾರು

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳಿಗೆ ತಡೆ ಹಾಕಲು ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕೊಲೆ, ಹಲ್ಲೆ, ಗಾಂಜಾ ಮಾರಾಟ ಸೇರಿದಂತೆ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ 5 ಮಂದಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ದವನಪ್ಪ, ದಾವಲಸಾಬ್, ಮುಸ್ತಾಕ್, ಅಭಿಷೇಕ್ ಹಾಗೂ ಸಾಹಿಲ್ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿದ್ದವು. ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸುತ್ತಿದ್ದ ಹಿನ್ನೆಲೆಯಲ್ಲಿ ಹಾಗೂ ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆಯಲ್ಲಿ ಬದಲಾವಣೆ ಕಾಣಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದೆಯೂ ಅಪರಾಧಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ರೋಹನ್ ಜಗದೀಶ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *