Breaking News

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು 6 ವರ್ಷದ ಮಗಳನ್ನೇ ಮುಗಿಸಿದ ತಾಯಿ!

ಹೈದರಾಬಾದ್‌ನ ಅಲ್ವಾಲ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕೊಲೆ ಮಾಡಿದ ಆರೋಪದಲ್ಲಿ ಪೊಲೀಸರ ವಶಕ್ಕೆ ಹೋಗಿದ್ದಾಳೆ. ಆರೋಪಿಯನ್ನು ರೇಖಾ ಎಂದು ಗುರುತಿಸಲಾಗಿದ್ದು, ವಿವಾಹೇತರ ಸಂಬಂಧಕ್ಕೆ ಮಗಳು ಅಡ್ಡಿಯಾಗಿದ್ದಾಳೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ರೇಖಾ ತನ್ನ ಮಗಳು ತನ್ವಿಕಾಳನ್ನು ಮನೆಯ ನೀರಿನ ಟ್ಯಾಂಕ್‌ನಲ್ಲಿ ಹಾಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಮಗಳು ಕಾಣೆಯಾಗಿದ್ದಾಳೆ ಎಂದು ನಾಟಕವಾಡಿ ಕುಟುಂಬದವರನ್ನು ದಾರಿ ತಪ್ಪಿಸಲು ಯತ್ನಿಸಿದ್ದಾಳೆ. ನಂತರ ಬಾಲಕಿಯ ಶವ ಪತ್ತೆಯಾದ ಬಳಿಕ ಪೊಲೀಸರು ತನಿಖೆ ನಡೆಸಿ, ಸಿಸಿಟಿವಿ ದೃಶ್ಯಾವಳಿ ಹಾಗೂ ವಿಚಾರಣೆಯ ಆಧಾರದ ಮೇಲೆ ರೇಖಾಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಯಿ ಎಂಬ ಯುವಕನ ಮೇಲೂ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *