ಧಾರವಾಡ ಜಿಲ್ಲೆಯ ಕರಡಿಗುಡ್ಡ ಗ್ರಾಮದಲ್ಲಿ ಮನೆಯ ದಾರಿ ವಿಚಾರಕ್ಕೆ ಸಹೋದರರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಮಲ್ಲಯ್ಯ ಚಿಕ್ಕಮಠ ಮೃತಪಟ್ಟವರಾಗಿದ್ದು, ತಮ್ಮ ಶ್ರೀಕಾಂತ ಚಿಕ್ಕಮಠ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ. ಮೇ 18ರ ರಾತ್ರಿ ದಾರಿ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಶುರುವಾಗಿ ಗಲಾಟೆ ತಾರಕಕ್ಕೇರಿತ್ತು. ಈ ವೇಳೆ ನಡೆದ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಲ್ಲಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

