Breaking News

8 ತಿಂಗಳ ಹೆಣ್ಣು ಮಗುವಿಗೆ ಆಯಸಿಡ್ ಕುಡಿಸಿದ ಪಾಪಿ ತಾಯಿ; ಅಮ್ಮನ ಕ್ರೌರ್ಯಕ್ಕೆ ಬೆಚ್ಚಿಬಿದ್ದ ದೇಶ

ರಾಜಸ್ಥಾನದ ಖೈರ್ತಾಲ್-ಭಿವಾಡಿ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ತಾಯಿಯೇ ತನ್ನ 8 ತಿಂಗಳ ಮಗುವಿಗೆ ಆಸಿಡ್ ಕುಡಿಸಿದ ಆರೋಪ ಕೇಳಿಬಂದಿದೆ. ಗಂಭೀರ ಸ್ಥಿತಿಯಲ್ಲಿರುವ ಮಗು ಕಾವ್ಯಗೆ ಅಲ್ವಾರ್ ಮಕ್ಕಳ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ವೇಳೆ ಮಗು ತಾಯಿಯೊಂದಿಗೆ ಮನೆಯಲ್ಲಿ ಒಬ್ಬಂಟಿಯಾಗಿತ್ತು ಎಂದು ತಿಳಿದುಬಂದಿದೆ. ಮಗುವಿನ ತಂದೆ ಮೋಹಿತ್, ಪೊಲೀಸರಿಗೆ ಮಾಹಿತಿ ನೀಡುವುದಾಗಿ ಹೇಳಿದ ಬಳಿಕ ಪತ್ನಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *