Breaking News

ಕಳವಿಗೆ ಯತ್ನ: ಬಾಲಕ ಸಹಿತ ಇಬ್ಬರ ಬಂಧನ

ಕುಂದಾಪುರ, ತ್ರಾಸಿಯ ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ಹಾಲ್‌ನಲ್ಲಿ ಅಳವಡಿಸಲಾದ ಸೆಂಟ್ರಲ್ ಎಸಿಯ ತಾಮ್ರದ ಪೈಪ್ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಗಂಗೊಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಸ್ರೂರು ಗ್ರಾಮದ ಮಹಮ್ಮದ್ ಹನೀಫ್ (18) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಬಂಧಿತರು.ಇವರು ಎ.16ರಂದು ಹಾಲ್‌ನ ಮೆಟ್ಟಿಲಿನ ಬಳಿ ಅಳವಡಿಸಲಾದ ಎಸಿಯ ತ್ರಾಮದ ಪೈಪ್ ಕಳವಿಗೆ ಯತ್ನಿಸಿರುವ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *