Breaking News

ಮಾದಕ ದ್ರವ್ಯ ಸಾಗಾಟ-ಮಾರಾಟ; ಓರ್ವನ ಬಂಧನ

ಉಡುಪಿ: ಮಾದಕ ದ್ರವ್ಯ ಸಾಗಾಟ, ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಉಡುಪಿ ನಗರ ಪೊಲೀಸರು ಮಂಗಳವಾರ (ಮೇ 19) ಬಂಧಿಸಿದ್ದಾರೆ. ಉಡುಪಿಯ ದೊಡ್ಡಣಗುಡ್ಡೆ ನಿವಾಸಿ ಅಬ್ದುಲ್​ ಹಮೀದ್​ ರೌಫ್​ (26) ಬಂಧಿತ ಆರೋಪಿ. ಬಂಧಿತನ ವಿರುದ್ಧ ಮಣಿಪಾಲ, ಉಡುಪಿ ನಗರ ಹಾಗೂ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿ ತಲಾ 1 ಪ್ರಕರಣ, ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ ಮಣಿಪಾಲ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿ ದಾಖಲಾದ 3 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಸೇವನೆಗೆ ದಾಖಲಾದ 2 ಪ್ರಕರಣಗಳಲ್ಲಿ ಶಿಕ್ಷೆ ಆಗಿದೆ. ಆರೋಪಿಯನನ್ನು ಪಿಐಟಿ ಎನ್​ಡಿಪಿಎಸ್​ ಕಾಯಿದೆಯಡಿ ಬಂಧಿಸಲು ಉಡುಪಿ ಜಿಲ್ಲಾ ಪೊಲೀಸ್​ ವರಿಷ್ಠ ಹರಿರಾಂ ಶಂಕರ್​ ಅವರ ವರದಿಯ ಮೇರೆಗೆ ಪಶ್ಚಿಮ ವಲಯ ಪೊಲೀಸ್​ ಮಹಾನಿರೀಕ್ಷಕರು ಮೇ 18ರಂದು ಬಂಧನ ಆದೇಶ ಹೊರಡಿಸಿದ್ದರು.
ಆರೋಪಿಯನ್ನು ವಿಜಯಪುರದ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿಡಲು ಆದೇಶಿಸಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *