Breaking News

ಬಾಲಕಿಯನ್ನು ಅತ್ಯಾಚಾರ ಮಾಡಿದ್ದ ಪೋಕ್ಸೋ ಆರೋಪಿ ಬಂಧನ

ಬೆಳ್ತಂಗಡಿ:ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಲಾಯಿಲದ ರಿಜ್ವಾನ್(38) ಎಂಬಾತ 2025 ರ ನವೆಂಬರ್‌ನಲ್ಲಿ ಅತ್ಯಾಚಾರ ಮಾಡಿ ವಿಚಾರ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಇದರಿಂದ ಬಾಲಕಿ ಭಯಗೊಂಡು ಯಾರಿಗೂ ವಿಷಯ ತಿಳಿಸಿರಲಿಲ್ಲ. ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಬಾಲಕಿ ಮೂರೂವರೆ ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿತ್ತು. ನೊಂದ ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೇ 17 ರಂದು ಈ ಬಗ್ಗೆ ದೂರು ನೀಡಿದ್ದರು. ಆರೋಪಿ ರಿಜ್ವಾನ್(38)ನನ್ನು ಸೋಮವಾರ ಸಂಜೆ ಉಜಿರೆಯ ನೀರಚಿಲುಮೆ ಬಳಿ ಬಂಧಿಸಿ ವಿಚಾರಣೆ ನಡೆಸಿ ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಮಂಗಳವಾರ ಪೊಲೀಸರು ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *