Breaking News

ಮಂಡ್ಯದಲ್ಲಿ ಭೀಕರ ಕೊಲೆ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಮಂಡ್ಯದಲ್ಲಿ ಭೀಕರವಾದ ಕೊಲೆ ನಡೆದಿದ್ದು ಕೆ ಹೊನ್ನಲಗೆರೆಯಲ್ಲಿ ಮಾರ್ಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊನಲಗಿರಿ ಗ್ರಾಮದಲ್ಲಿ ಈ ಒಂದು ಕೊಲೆ ನಡೆದಿದೆ. ಮದ್ದೂರು ತಾಲೂಕಿನ ಚುಂಚಗನಹಳ್ಳಿ ನಿವಾಸಿ ಸುನಿಲ್ (29) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಸುನಿಲ್ ಬೈಕ್ ನಲ್ಲಿ ತಿರುಳುತ್ತಿದ್ದಾಗ ಏಕಾಏಕಿ ಅಟ್ಯಾಕ್ ನಡೆಸಿದ ದುಷ್ಕರ್ಮಿಗಳು, ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಸುನೀಲನನ್ನ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯೆ ಸುನಿಲ್ ಸಾವನಪ್ಪಿದ್ದಾನೆ ಬೈಕ್ನಲ್ಲಿ ಇದ್ದ ಸತೀಶ್ ಮತ್ತು ಸಿದ್ದರಾಜುಗೆ ಯಾವುದೇ ಗಾಯವಾಗಿಲ್ಲ ಸ್ಥಳಕ್ಕೆ ಮಂಡ್ಯ ಎಸ್ಪಿ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮದ್ದೂರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *