Breaking News

ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ನಾಟಾ ವಶ

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿಟ್ಟಿದ್ದ ಬೀಟೆ ನಾಟಾಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಸರ್ವೆ ನಂ.15ರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಇಟ್ಟಿದ್ದ 2ರಿಂದ 3 ವರ್ಷ ಹಳೆಯದಾದ ಬೀಟೆ ಜಾತಿಯ 14 ನಾಟಾ ವಶಕ್ಕೆ ಪಡೆದಿದ್ದಾರೆ. ಆರೋಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿ ಎಂ. ಗಣೇಶ (40) ಎಂಬಾತನನ್ನು ಬಂಧಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *