ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೇ 12ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೊಮೋಸ್ ಅಂಗಡಿ ನಡೆಸುತ್ತಿದ್ದು, ಅದನ್ನು ಮಾರಾಟ ಮಾಡುವ ವೇಳೆ ಬ್ರೋಕರ್ ಹೈನಾಸ್ ಸಂಪರ್ಕಕ್ಕೆ ಬಂದಿದ್ದನು. ಅಂಗಡಿ ಖರೀದಿ ಸಂಬಂಧ ಘೋಷ್, ಅತುಲ್ ಹಾಗೂ ಹೈನಾಸ್ ಜೊತೆ ಪಾರ್ಟಿ ನಡೆದಿತ್ತು. ಈ ವೇಳೆ ಇತರರು ಹೊರಗಡೆ ಹೋಗಿದ್ದಾಗ, ಹೈನಾಸ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆ ದೂರು ನೀಡಲು ಹೋದಾಗ ಆರಂಭದಲ್ಲಿ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಹಿರಿಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಮಡಿವಾಳ ಪೊಲೀಸರು ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Check Also
ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!
ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …
bigtvnews | Hubli Dharwad News | Kannada News | Karnataka News Hubli News | News In Hubli | Local news

