ರಾಯಚೂರಿನಲ್ಲಿ ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ಸನಾವುಲ್ಲಾ ಮೇಲೆ ಸುಮಾರು 30 ಜನರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿದೆ. ತಲಮಾರಿ ಗ್ರಾಮದ ಮಸೀದಿ, ಖಬರಸ್ತಾನ ಹಾಗೂ ಈದ್ಗಾ ಅಭಿವೃದ್ಧಿಗೆ ಬಿಡುಗಡೆಯಾದ ₹26 ಲಕ್ಷ ಅನುದಾನದಲ್ಲಿ ದುರ್ಬಳಕೆ ಆರೋಪಿಸಿ ಸನಾವುಲ್ಲಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಬಳಿಕ ರಾಜಿ ಮಾತುಕತೆ ನೆಪದಲ್ಲಿ ಅವರನ್ನು ತಹಶಿಲ್ದಾರ್ ಕಚೇರಿ ಬಳಿ ಕರೆಸಿ ಚಾಕು ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡ ಸನಾವುಲ್ಲಾ ಅವರಿಗೆ 24 ಹೊಲಿಗೆ ಹಾಕಲಾಗಿದ್ದು, ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ 15ಕ್ಕೂ ಹೆಚ್ಚು ಜನರ ವಿರುದ್ಧ ಸದರ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

