Breaking News

ಹಣ ವಾಪಸ್ ಕೇಳಿದ ವ್ಯಕ್ತಿಗೆ ನರಕ ದರ್ಶನ! ಕಾರಿನ ಬಾನೆಟ್ ಮೇಲೆಯೇ ಎಳೆದೊಯ್ದ ಆರ್‌ಟಿಐ ಕಾರ್ಯಕರ್ತ ಗಂಗರಾಜು?

ಮೈಸೂರು: ಕೊಟ್ಟ ಹಣವನ್ನು ವಾಪಸ್ ಕೇಳಿದ ವ್ಯಕ್ತಿಯನ್ನು ಕಾರಿನ ಬಾನೆಟ್ ಮೇಲೆ ಕೂರಿಸಿಕೊಂಡೇ ಪೊಲೀಸ್ ಠಾಣೆವರೆಗೆ ಕಾರು ಚಲಾಯಿಸಿದ ಘಟನೆ ಕುವೆಂಪುನಗರದಲ್ಲಿ ನಡೆದಿದೆ. ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಧನಂಜಯ 50:50 ನಿವೇಶನದ ಹೆಸರಲ್ಲಿ ಹಣ ನೀಡಿದ್ದರೆಂದು ಹೇಳಲಾಗಿದೆ. ಆದರೆ ಮುಡಾ ಹಗರಣದ ಬಳಿಕ ನಿವೇಶನ ಮಂಜೂರು ಪ್ರಕ್ರಿಯೆ ರದ್ದಾದ ಕಾರಣ ಧನಂಜಯ ಹಣ ವಾಪಸ್ ಕೇಳುತ್ತಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಸಬ್‌ ರಿಜಿಸ್ಟ್ರಾರ್ ಕಚೇರಿ ಬಳಿ ಇಬ್ಬರ ನಡುವೆ ಜಗಳ ನಡೆದಿದ್ದು, ಗಂಗರಾಜು ಕಾರಿನಲ್ಲಿ ತೆರಳಲು ಮುಂದಾದಾಗ ಧನಂಜಯ ಬಾನೆಟ್ ಮೇಲೆ ಹತ್ತಿದ್ದಾನೆ ಎಂದು ಹೇಳಲಾಗಿದೆ. ಆದರೂ ಗಂಗರಾಜು ಕಾರು ನಿಲ್ಲಿಸದೇ ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿವರೆಗೆ ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಇಬ್ಬರೂ ಪರಸ್ಪರ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *