Breaking News

ಶಿವಾನಂದ ನೀಲಣ್ಣವರ ಬಹುಕೋಟಿ ವಂಚನೆ ಪ್ರಕರಣ ಬೆನ್ನಲ್ಲೇ, ಹುಬ್ಬಳ್ಳಿಯಲ್ಲಿ ಶಿಕ್ಷಕ ಸಮುದಾಯಕ್ಕೆ ₹ 200 ಕೋಟಿ ದೋಖಾ!

ಹುಬ್ಬಳ್ಳಿ: ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ ಶಿವಾನಂದ ನೀಲಣ್ಣವರ ₹4500 ಕೋಟಿ ವಂಚನೆ ಪ್ರಕರಣದ ಬೆನ್ನಲ್ಲೇ ಧಾರವಾಡ ಜಿಲ್ಲೆಯಲ್ಲಿ ಶಿಕ್ಷಕರನ್ನೇ ಗುರಿಯಾಗಿಸಿಕೊಂಡು ₹200 ಕೋಟಿಗೂ ಅಧಿಕ ವಂಚನೆ ನಡೆದಿರುವ ಆರೋಪ ಕೇಳಿಬಂದಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹಣ ದುಪ್ಪಟ್ಟು ಆಗುತ್ತದೆ ಎಂದು ನಂಬಿಸಿ ಹಲವಾರು ಶಿಕ್ಷಕರಿಂದ ಹಣ ಸಂಗ್ರಹಿಸಲಾಗಿದೆ. ಹುಬ್ಬಳ್ಳಿಯ ಮೂವರು ಶಿಕ್ಷಕರು ಹಾಗೂ ಕೆಲ ಏಜೆಂಟರು ಸೇರಿ ವಿವಿಧ ಜಿಲ್ಲೆಗಳ ಶಿಕ್ಷಕರಿಂದ ಕೋಟಿ ಕೋಟಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಆರಂಭದಲ್ಲಿ ಕೆಲವರಿಗೆ ಬಡ್ಡಿ ನೀಡಿದ್ದರಿಂದ ಹಲವರು ಸಂಬಳ, ಆಸ್ತಿ ಮಾರಿದ ಹಣ, ಸಾಲದ ಮೊತ್ತವನ್ನೂ ಹೂಡಿಕೆ ಮಾಡಿದ್ದಾರೆ. ಆದರೆ ಇದೀಗ ಏಜೆಂಟರು ನಾಪತ್ತೆಯಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿವೆ. ಸರ್ಕಾರಿ ನೌಕರಿಗೆ ಸಮಸ್ಯೆಯಾಗಬಹುದು ಎಂಬ ಭಯದಿಂದ ಶಿಕ್ಷಕರು ದೂರು ನೀಡಲು ಹಿಂದೆ ಸರಿದಿದ್ದರೂ, ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರುವ ಚಿಂತನೆ ನಡೆಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *