Breaking News

ಉಡುಪಿ: ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಭಾರಿ ವಂಚನೆ; ₹1.85 ಲಕ್ಷ ಕಳೆದುಕೊಂಡ ಯುವಕ

ಉಡುಪಿ: ಫೇಸ್‌ಬುಕ್‌ನಲ್ಲಿ ಕಂಡ ನಕಲಿ ಹೂಡಿಕೆ ಜಾಹೀರಾತು ನಂಬಿದ ಉಡುಪಿಯ ಯುವಕನೊಬ್ಬ ₹1.85 ಲಕ್ಷ ಕಳೆದುಕೊಂಡು ಸೈಬರ್ ವಂಚನೆಗೆ ಒಳಗಾಗಿದ್ದಾನೆ. ‘IIFL Capital Services’ ಹೆಸರಿನ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿದ ಬಳಿಕ ಶಿವಶಂಕರ ಎಂಬ ಯುವಕ ವಾಟ್ಸಾಪ್‌ ಗ್ರೂಪ್‌ಗೆ ಸೇರಿದ್ದಾನೆ. ಬಳಿಕ ಆರೋಪಿಗಳು ‘DMAPLUS’ ಆ್ಯಪ್ ಇನ್‌ಸ್ಟಾಲ್ ಮಾಡಿಸಿ ಟ್ರೇಡಿಂಗ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಲಾಭವೂ ಸಿಗದೆ, ಹೂಡಿಕೆ ಮಾಡಿದ ಹಣವೂ ವಾಪಸ್ ಬರದ ಹಿನ್ನೆಲೆ ವಂಚನೆ ನಡೆದಿರುವುದು ಗೊತ್ತಾಗಿದೆ. ಈ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *