Breaking News

ಬಳ್ಳಾರಿಯಲ್ಲಿ ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ

ವಿವಿಧ ಏರಿಯಾಗಳಲ್ಲಿ ನಡೆದಿದ್ದ ವೇಶ್ಯಾವಾಟಿಕೆ ದಂಧೆಗೆ ಕಡಿವಾಣ ಹಾಕಲು ಪೊಲೀಸರು ಸತ ಕಾರ್ಯಾಚರಣೆ ನಡೆಸಿದ್ದಾರೆ. ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಮನೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ದಂಧೆಯಲ್ಲಿ ತೊಡಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ 8 ಮಹಿಳಾ ಸಂತ್ರಸ್ತೆಯರನ್ನು ರಕ್ಷಣೆ ಮಾಡಲಾಗಿದೆ. ಗಾಂಜಾ, ಇಸ್ಪೀಟ್ ದಂಧೆಯಂತೆ ವೇಶ್ಯಾವಾಟಿಕೆಯೂ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮುಂದಿನ ದಿನಗಳಲ್ಲೂ ಕಾರ್ಯಾಚರಣೆ ಮುಂದುವರಿಸಲಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *