Breaking News

ಗೌಜಲ ಹಕ್ಕಿ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

ಕೊಳ್ಳೇಗಾಲ: ತಾಲ್ಲೂಕಿನ ದಾಸನಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಗೌಜಲ ಹಕ್ಕಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮಾದೇಶ ಬಂಧಿತ ಆರೋಪಿ. ಈತ ಪಂಜರಗಳಲ್ಲಿ ಗೌಜಲ ಹಕ್ಕಿಯನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಹಕ್ಕಿಗಳ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 12 ಗೌಜಲ ಹಕ್ಕಿ, 3 ಪಂಜರಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *