Breaking News

ತಡರಾತ್ರಿ ಆಸ್ಪತ್ರೆಯಲ್ಲೇ ವೈದ್ಯನ ಮೇಲೆ ಹಲ್ಲೆ

ಬೀದರ್ ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ನಾಲ್ಕೈದು ಜನರು ಡಾ. ತುಕಾರಾಂ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕಿತ್ಸೆ ವಿಚಾರವಾಗಿ ವಾಗ್ವಾದ ನಡೆದು ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಚಿಕಿತ್ಸೆಗಾಗಿ ತಡರಾತ್ರಿ ಆಸ್ಪತ್ರೆಗೆ ಬಂದಿದ್ದ ಯುವಕರಿಂದ ಹಲ್ಲೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಯುವಕರು ಕರೆತಂದಿದ್ದರು. ಚಿಕಿತ್ಸೆ ವಿಚಾರವಾಗಿ ವೈದ್ಯ ಮತ್ತು ಯುವಕರ ನಡುವೆ ಗಲಾಟೆಯಾಗಿ ಹಲ್ಲೆ ಮಾಡಲಾಗಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ತುಕಾರಾಂ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೀದರ್ ನ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *