ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಪನಾಳ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ದಲಿತ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸತ್ತೇಪ್ಪ ಲಕ್ಷ್ಮಣ ಬಿಲಕಾರ ಅವರಿಗೆ ಸೇರಿದ ಜಮೀನಿನಲ್ಲಿ ಭರಮಪ್ಪ ಹನಮಂತ ಹರಿಜನ ಹಾಗೂ ಲಕ್ಷೀಬಾಯಿ ಹರಿಜನ ಅರಿಶಿನ ಬೀಜ ಬಿತ್ತನೆ ಮಾಡುತ್ತಿದ್ದ ವೇಳೆ ಆರೋಪಿಗಳು ಸ್ಥಳಕ್ಕೆ ಬಂದು ಜಗಳ ಆರಂಭಿಸಿದ್ದಾರೆ ಎನ್ನಲಾಗಿದೆ. ಜಮೀನು ಬಿಟ್ಟು ಹೋಗುವಂತೆ ಬೆದರಿಕೆ ಹಾಕಿದ ಆರೋಪಿಗಳು, ಮಚ್ಚು, ಬಡಿಗೆ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯಲ್ಲಿ ಗಾಯಗೊಂಡ ಕುಟುಂಬದ ಸದಸ್ಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ಮರ್ದಿ ಹಾಗೂ ಗದಾಡಿ ಕುಟುಂಬದವರ ವಿರುದ್ಧ ರಾಯಭಾಗ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

