Breaking News

ಗುಂಡು ಹಾರಿಸಿ ಸಹೋದರರ ಹತ್ಯೆ

ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸನಗರ ಪ್ರದೇಶದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಇಬ್ಬರು ಸಹೋದರರು ಸಾವನ್ನಪ್ಪಿ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾತ್ರಿ ಸುಮಾರು 8.30ರ ವೇಳೆಗೆ ಕೈಲಾಶ್ ಕಾಲೋನಿಯಲ್ಲಿ ಈ ದಾಳಿ ನಡೆದಿದ್ದು, ದುಷ್ಕರ್ಮಿಗಳು ಸುಮಾರು 15 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಹಿಲ್ ಲೈನ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪ್ರದೇಶವನ್ನು ಸುತ್ತುವರಿದು ಭದ್ರತೆ ಹೆಚ್ಚಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಹಳೆಯ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *