ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪೂರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಮೃತರನ್ನು ಟೋಲು ಪಾಶಾ (27), ಮಹಿಬೂಬ್ (45), ಹುಸೇನಿ ಬುಡಾನ್ ಶಾಹಾ (48), ರಸೂಲ್ ಬಿ (42) ಮತ್ತು ಫಾತಿಮಾ (38) ಎಂದು ಗುರುತಿಸಲಾಗಿದೆ. ಇವರು ಯಾದಗಿರಿ ಆಸ್ಪತ್ರೆಗೆ ಅನಾರೋಗ್ಯ ಪೀಡಿತ ಸಂಬಂಧಿಯನ್ನು ದಾಖಲಿಸಿ ವಾಪಸ್ ಇಂಗಳಗಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಡಿಕ್ಕಿ ತೀವ್ರವಾಗಿದ್ದರಿಂದ ವಾಹನ ಸಂಪೂರ್ಣ ಜಖಂಗೊಂಡಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಾಡಿ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

