ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಮುಸುಕುಧಾರಿಗಳು ಎಸ್ಕೇಪ್ ಆಗಿದ್ದಾರೆ.10 ವರ್ಷದ ಮಣಿಕಂಠ ಗಾಣಿಗೇರ ಎಂಬ ಬಾಲಕನಿಗೆ ಇಂಜೆಕ್ಷನ್ ಹಾಕಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಮಣಿಕಂಠನನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಗಟ್ಟಿಯಾಗಿ ಬಾಯಿ ಹಿಡಿದು ಇಂಜೆಕ್ಷನ್ ಚುಚ್ಚಿ ಪರಾರಿಗಿದ್ದಾರೆ. ಕೂಡಲೇ ಬಾಲಕನನ್ನು ಪೋಷಕರು ಕುಂದಗೋಳ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನಿಗೆ ಯಾವ ಇಂಜೆಕ್ಷನ್ ಹಾಕಿದ್ದಾರೆ ಎಂದು ಪೋಷಕರಲ್ಲಿ ಆತಂಕ ಉಂಟಾಗಿದ್ದು, ಈ ಘಟನೆ ಗ್ರಾಮಸ್ಥರನ್ನು ಕಂಗಾಲಾಗಿಸಿದೆ, ಅಲ್ಲದೇ ಮಕ್ಕಳನ್ನು ಹೊರಗೆ ಬಿಡಲು ಪೋಷಕರ ಹಿಂದೇಟು ಹಾಕುತ್ತಿದ್ದಾರೆ. ಗ್ರಾಮಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

