Breaking News

ಪುಷ್ಪ ಸಿನಿಮಾ ಶೈಲಿಯಲ್ಲಿ ಅಕ್ರಮ ಸ್ಪಿರಿಟ್ ಸಾಗಾಟ: 35 ಲಕ್ಷ ಮೌಲ್ಯದ ಟ್ಯಾಂಕರ್ ಜಪ್ತಿ, ಓರ್ವನ ಬಂಧನ!

ಬೆಳಗಾವಿ ಜಿಲ್ಲೆಯ ಜಾಂಬೋಟಿ ಬಳಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 14 ಸಾವಿರ ಲೀಟರ್ ಸ್ಪಿರಿಟ್ ವಶಪಡಿಸಿಕೊಂಡಿದ್ದಾರೆ. ಸುಮಾರು ₹35 ಲಕ್ಷ ಮೌಲ್ಯದ ಸ್ಪಿರಿಟ್ ಜಪ್ತಿ ಮಾಡಲಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ‘ಪುಷ್ಪ’ ಸಿನಿಮಾ ಶೈಲಿಯಲ್ಲಿ ಟ್ಯಾಂಕರ್ ಒಳಗೆ ಸಣ್ಣ ಪೈಪ್‌ಗಳಲ್ಲಿ ಮಾತ್ರ ಆಯಿಲ್ ತುಂಬಿ, ಅದರ ಸುತ್ತ ಸ್ಪಿರಿಟ್ ಅಡಗಿಸಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದ ಅಧಿಕಾರಿಗಳು ಅನುಮಾನಗೊಂಡು ಪರಿಶೀಲಿಸಿದಾಗ ಅಕ್ರಮ ದಂಧೆ ಬಯಲಾಗಿದೆ. ನೆಲಮಂಗಲದಿಂದ ಗೋವಾಕ್ಕೆ ಸ್ಪಿರಿಟ್ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಪ್ರಕರಣ ಸಂಬಂಧ ಮತ್ತಷ್ಟು ತನಿಖೆ ಮುಂದುವರಿದಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *