ತಮಿಳುನಾಡಿನ ಕೊಯಮತ್ತೂರಿನ ಸುಲೂರು ಪ್ರದೇಶದಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಣ್ಣಂಪಾಳಯಂ ಸರೋವರದ ಬಳಿ ಬಾಲಕಿಯ ಶವ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ದಿನಸಿ ಖರೀದಿಸಲು ಹೋಗಿದ್ದ ವೇಳೆ ಅಪಹರಣ ನಡೆದಿದೆ ಎನ್ನಲಾಗಿದೆ. ಘಟನೆ ಬಳಿಕ ಕುಟುಂಬಸ್ಥರು ಹಾಗೂ ಸಾರ್ವಜನಿಕರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಸಂದೀಪ್ ರೈ ರಾಥೋಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

