Breaking News

ನೇಣಿಗೆ ಶರಣಾದ ಪೊಲೀಸ್ ಕಾನ್ ಸ್ಟೆಬಲ್ ಪತ್ನಿ: ವರದಕ್ಷಿಣೆ ಕಿರುಕುಳ ಆರೋಪದಡಿ ದೂರು

ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಪೊಲೀಸ್ ಕಾನ್ಸ್‌ಟೆಬಲ್ ರಾಜೇಶ್ ಆರಾಧ್ಯ ಅವರ ಪತ್ನಿ ಲಕ್ಷ್ಮಿಪ್ರಿಯಾ (27) ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ ಮೂಲದ ದಂಪತಿಗೆ ಎಂಟು ತಿಂಗಳ ಮಗು ಇದೆ. ತಂದೆ-ತಾಯಿಗೆ ಗೌರವ ನೀಡುವುದಿಲ್ಲ ಎಂದು ಪತಿ ಬೈದಿದ್ದರಿಂದ ಮನನೊಂದು ಲಕ್ಷ್ಮಿಪ್ರಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಮದುವೆಯಾದ ಬಳಿಕ ಪತಿ ಹಾಗೂ ಕುಟುಂಬ ಸದಸ್ಯರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಲಕ್ಷ್ಮಿಪ್ರಿಯಾ ಪೋಷಕರು ನೀಡಿದ ದೂರಿನ ಮೇರೆಗೆ ಪತಿ ರಾಜೇಶ್ ಆರಾಧ್ಯ ಹಾಗೂ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ಸೇರಿದಂತೆ ವಿವಿಧ ಆರೋಪಗಳಡಿ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *