ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವೃದ್ಧೆಯ ಸರಗಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹1 ಲಕ್ಷ ಮೌಲ್ಯದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ₹40 ಸಾವಿರ ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ. ಮೇ 13ರಂದು ಸೂರ್ಯ ಬಡಾವಣೆಯ 73 ವರ್ಷದ ವೃದ್ಧೆಯೊಬ್ಬರು ವಾಕಿಂಗ್‌ಗೆ ತೆರಳಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ವಿನೋಬನಗರ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ತನಿಖೆಯ ವೇಳೆ ಭರತ್ (21) ಹಾಗೂ ಮೊಹ್ಮದ್ ಆಬೀದ್ (19) ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳವು ಮಾಡಿದ್ದ ಚಿನ್ನದ ಸರ ಮತ್ತು ಬೈಕ್ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಭೇದಿಸಿದ ಪೊಲೀಸ್ ತಂಡವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

