Breaking News

ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಭಾಗ್ಯಶ್ರೀ(18) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಕಲಬುರ್ಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ. ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ವೈದ್ಯಕೀಯ ಶಿಕ್ಷಣದ ಬಗ್ಗೆ ಬಹಳ ನಿರೀಕ್ಷೆ ಹೊಂದಿದ್ದರು. ಮೇ 3ರಂದು ನೀಟ್ ಪರೀಕ್ಷೆ ಬರೆದಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾಗ್ಯಶ್ರೀ ಶೇಕಡ 92 ರಷ್ಟು ಅಂಕ ಪಡೆದಿದ್ದರು. ಕುಟುಂಬ ಸದಸ್ಯರ ಜೊತೆಗೆ ಭಾಗ್ಯಶ್ರೀ ಬಹಳ ಚೆನ್ನಾಗಿಯೇ ಇದ್ದಳು. ಇವಾಗ ಆಕೆಯೇ ಹೋಗಿದ್ದಾಳೆ. ನಾವು ಯಾರ ಮೇಲೆ ದೂರೋಣ ಎಂದು ಆತ್ಮಹತ್ಯೆಗೆ ಶರಣಾದ ಭಾಗ್ಯಶ್ರೀ ತಂದೆ ರಾಜಶೇಖರ ಹೇಳಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *