ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸೇನೆಯ 38 ವರ್ಷದ ಯೋಧನೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 23 ವರ್ಷದ ಯುವತಿ ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ಲಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ”ಆರೋಪಿ ಯೋಧನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸಂತ್ರಸ್ತೆಯ ಹೇಳಿಕೆ ಮತ್ತು ತಾಂತ್ರಿಕೆ ಪುರಾವೆಗಳ ಆಧಾರದಲ್ಲಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಲಾಲ್‌ಪುರ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ರೂಪೇಶ್ ಕುಮಾರ್ ತಿಳಿಸಿದ್ದಾರೆ. ಆರೋಪಿ ಯೋಧ ಹರಿಯಾಣ ಮೂಲದವನಾಗಿದ್ದು, ರಾಂಚಿಯ ನಾಮ್ಕುಮ್ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ. ಘಟನಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ ಎಂದು ಮತ್ತೊಬ್ಬರು ಅಧಿಕಾರಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

