Breaking News

ಚಿತ್ರದುರ್ಗ | ಬೈಕ್, ಕಾರು & ಲಾರಿ ನಡುವೆ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ ತಾಲ್ಲೂಕಿನ ತಮಟಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ, ಕಾರು ಹಾಗೂ ಬೈಕ್ ನಡುವೆ ನಡೆದ ಈ ದುರ್ಘಟನೆಯಲ್ಲಿ ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ (45) ಮತ್ತು ಬಸವರಾಜಪ್ಪ (50) ಮೃತರಾದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿ ಮತ್ತು ಕಾರು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ, ಕಾರು ಪಕ್ಕದಲ್ಲೇ ಸಾಗುತ್ತಿದ್ದ ಬೈಕ್‌ಗೆ ಜೋರಾಗಿ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿದ್ದರಿಂದ ಕೆಲಕಾಲ ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ, ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *