Breaking News

ಬೆಂಗಳೂರಲ್ಲಿ ಕೂತು ಅಮೆರಿಕನ್ನರಿಗೆ ಪಂಗನಾಮ : ನಕಲಿ ಕಾಲ್‌ಸೆಂಟರ್‌ ಕಿಲಾಡಿಗಳು ಅರೆಸ್ಟ್!

ಬೆಂಗಳೂರು ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಟೆಕ್ಕಿಗಳು ಎಐ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ಅಮೆರಿಕದ ನಾಗರಿಕರಿಗೆ ಸುಮಾರು ₹40 ಕೋಟಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಶಾಂತ್ ಮತ್ತು ಆಕಾಶ್ ಗುಪ್ತಾ ಎಂಬ ಆರೋಪಿಗಳು ನಕಲಿ ಕಾಲ್ ಸೆಂಟರ್ ಸ್ಥಾಪಿಸಿ, ಅಮೆರಿಕದ ಬ್ಯಾಂಕ್ ಹಾಗೂ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ಜನರ ಬ್ಯಾಂಕ್ ಖಾತೆ ವಿವರ ಪಡೆದು ಹಣ ದೋಚುತ್ತಿದ್ದರು ಎನ್ನಲಾಗಿದೆ. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದಲ್ಲಿ ಇನ್ನಷ್ಟು ಮಂದಿಯ ಪಾತ್ರ ಹಾಗೂ ಹಣದ ಹೂಡಿಕೆ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *