Breaking News

ಬೆಂಗಳೂರು ಪೊಲೀಸ್ ಕ್ವಾಟ್ರಸ್ ಮನೆಯಲ್ಲೇ ನೇಣಿಗೆ ಶರಣಾದ ಪೊಲೀಸಪ್ಪನ ಹೆಂಡ್ತಿ! ಕಾನ್‌ಸ್ಟೇಬಲ್‌ ಮೇಲೆ ಕೇಸು!

ಬೆಂಗಳೂರು ನಗರದ ಕೆ.ಆರ್. ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಕಾನ್ಸ್‌ಟೇಬಲ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟ ಘಟನೆ ಪೊಲೀಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಮೃತ ಮಹಿಳೆಯನ್ನು ರಶ್ಮಿ ಎಂದು ಗುರುತಿಸಲಾಗಿದೆ. ರಶ್ಮಿ ಹಾಗೂ ಅವರ ಪತಿ ರಾಜೇಶ್ ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು, ರಾಜೇಶ್ ಸದ್ಯ HAL ಪೊಲೀಸ್ ಠಾಣೆ ಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಕೆ.ಆರ್. ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಆದರೆ ವೈಯಕ್ತಿಕ ಹಾಗೂ ಕೌಟುಂಬಿಕ ಕಾರಣಗಳಿಂದ ಮನನೊಂದಿದ್ದ ರಶ್ಮಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ರಶ್ಮಿ ಪೋಷಕರು ಕೆ.ಆರ್. ಪುರಂ ಪೊಲೀಸ್ ಠಾಣೆ ಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಕಾನ್ಸ್‌ಟೇಬಲ್ ರಾಜೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕೌಟುಂಬಿಕ ಕಲಹ ಅಥವಾ ಪತಿಯ ಕಿರುಕುಳವೇ ಸಾವಿಗೆ ಕಾರಣವೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ರಶ್ಮಿ ಮೃತದೇಹವನ್ನು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಅಂತ್ಯಸಂಸ್ಕಾರಕ್ಕಾಗಿ ಕುಟುಂಬಸ್ಥರು ಕೊಂಡೊಯ್ದಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *