ಭಟ್ಕಳ: ತಾಲೂಕಿನ ಹಾಡುವಳ್ಳಿ ಗ್ರಾಮದ ಹಲ್ಯಾಣಿ ಸಮೀಪ ಅಕ್ರಮವಾಗಿ ಐಷಾರಾಮಿ ಕಾರಿನಲ್ಲಿ ಜಾನುವಾರುಗಳನ್ನು ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಮಗ್ದಮ್ ಕಾಲೋನಿಯ ನಿವಾಸಿ ಮೊಹಮ್ಮದ್ ದಾನಿಶ್ (30) ಬಂದಿತ ಆರೋಪಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾದ ಎರಡು ದಿನಗಳಲ್ಲೇ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೇ 17ರಂದು ಬೆಳಗಿನ ಜಾವ ಹಲ್ಯಾಣಿ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಮಾರುತಿ ಸುಜುಕಿ ಬಲೆನೋ ಕಾರಿನಲ್ಲಿ ಅಕ್ರಮವಾಗಿ ಜಾನುವಾರಗಳನ್ನು ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆ ವಾಹನವನ್ನು ಗಮನಿಸಿದ ಆರೋಪಿತರು ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಪ್ರಕರಣದಲ್ಲಿ ಒಟ್ಟು ನಾಲ್ವರು ಭಾಗಿಯಾಗಿದ್ದು, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯ ಪಿಎಐ ಭರಮಪ್ಪ ಬೆಳಗಲಿ ನೇತೃತ್ವದ ತಂಡಸಲ್ಲಿ ಪೊಲೀಸ್ ಸಿಬ್ಬಂದಿ ಮದರಸಾಬ್ ಚಿಕ್ಕೇರಿ, ಈರಣ್ಣ ಬಾಗಪ್ಪ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

