ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕೊಡವೂರು ಜುಮಾದಿ ನಗರದಲ್ಲಿ ಬಾವಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ರಮೇಶ್ ಮೃತ ಕಾರ್ಮಿಕನಾಗಿದ್ದು, ಬಾವಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ಮಣ್ಣಿನಡಿಯಲ್ಲಿ ಸಿಲುಕಿದ್ದರು. ಘಟನೆಯ ಬಳಿಕ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಸುಮಾರು ಐದು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತಡರಾತ್ರಿ ಮೃತದೇಹವನ್ನು ಹೊರತೆಗೆದರು. ಇತರ ಕಾರ್ಮಿಕರು ಅಪಾಯದಿಂದ ಪಾರಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

