Breaking News

ಶ್ಮಶಾನದಲ್ಲಿ ಕತ್ತು ಕೊಯ್ದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು: ಯುವಕನೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಶೋಕನಗರ ಠಾಣೆ ವ್ಯಾಪ್ತಿಯ ವಿಲ್ಸನ್‌ಗಾರ್ಡನ್‌ ಶ್ಮಶಾನದಲ್ಲಿ ನಡೆದಿದೆ. ವಿಲ್ಸನ್‌ಗಾರ್ಡನ್‌ ನಿವಾಸಿ ಗೌತಮ್‌ (29) ಆತ್ಮಹತ್ಯೆ ಮಾಡಿಕೊಂಡವ. ಮೇ 21 ರಂದು ತಡರಾತ್ರಿ ವಿಲ್ಸನ್‌ಗಾರ್ಡನ್‌ ಸ್ಮಶಾನಕ್ಕೆ ಬಂದಿರುವ ಗೌತಮ್‌ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು. ಗೌತಮ್‌ ಕೆಲ ವರ್ಷಗಳಿಂದ ಮಾನಸಿಕ ಅಸ್ವಸ್ಥನಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಜತೆಗೆ ಆತನ ಪೋಷಕರು ಪುನರ್ವಸತಿ ಕೇಂದ್ರಕ್ಕೂ ದಾಖಲಿಸಿದ್ದರು. ಆದರೆ, ಕೆಲ ದಿನಗಳ ಹಿಂದೆ ಪುನರ್ವಸತಿ ಕೇಂದ್ರದಿಂದ ಏಕಾಏಕಿ ಬಂದು, ಸ್ಮಶಾನಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿದೆ. ಮೇಲ್ನೋಟಕ್ಕೆ ಕೊಲೆ ಆಗಿರಬಹುದೆಂಬ ಅನುಮಾನ ಇತ್ತು. ಆದರೆ, ತನಿಖೆ ವೇಳೆ ಯುವಕ ಆತ್ಮಹತ್ಯೆ ಮಾಡಿಕೊಂಡಿರೋದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *