Breaking News

ಶಿವಮೊಗ್ಗ: ಕಾರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಐವರ ಬಂಧನ

ಕಾರಿನೊಳಗೆ ಕುಳಿತು ಮೊಬೈಲ್ ಆಯಪ್ ಮೂಲಕ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಐವರು ಯುವಕರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‌ಎಂಸಿ ಯಾರ್ಡ್‌ ಹತ್ತಿರ ಗುರುವಾರ ಕಾರಿನಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ ಆಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.ದಾಳಿಯ ವೇಳೆ ಐವರು ಯುವಕರು ‘ಕ್ರಿಕ್‌ ಲೈನ್‌ ಗುರು’ ಎಂಬ ಮೊಬೈಲ್‌ ಫೋನ್ ಅಪ್ಲಿಕೇಷನ್‌ ಬಳಸಿ ಆನ್‌ಲೈನ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿರುವುದು ಪತ್ತೆಯಾಗಿದೆ. ಆರೋಪಿಗಳಿಂದ ₹ 35,000 ನಗದು, ಏಳು ಆಯಂಡ್ರಾಯ್ಡ್‌ ಮೊಬೈಲ್‌ ಫೋನ್‌ಗಳು, ಕೃತ್ಯಕ್ಕೆ ಬಳಸಿದ್ದ ಎಕ್ಸ್‌ಯುವಿ 300 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *